Media Release

Mangaluru, Aug 28 : Cultural Fest was celebrated at Rosa Mystica PU College Kinnikambla on 28th August 2022.


ಕಿನ್ನಿಕಂಬಳ : ರೋಸಾ ಮಿಸ್ತಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ದಿನೋತ್ಸವ

ದಿನಾಂಕ 27.08.2022ರಂದು ಕಾಲೇಜಿನ ಸಭಾಂಗಣದಲ್ಲಿ ಸಾಂಸ್ಕೃತಿಕ ದಿನೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ವಿವಿಧ ಸ್ಪರ್ಧೆಗಳನ್ನು ನಡೆಸಲಾಗಿತ್ತು.

ಇದಕ್ಕೂ ಮೊದಲು ವೇದಿಕೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಥನಿ ಶಿಕ್ಷಣ ಸಂಯೋಜಕರಾದ ಭಗಿನಿ ಶುಭ ಬಿಎಸ್ ರವರು ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ನಮ್ಮ ವಿದ್ಯಾರ್ಥಿಗಳು ಭಾರತದ ಸಂವಿಧಾನದ ಪೂರ್ವ ಪೀಠಿಕೆಯಲ್ಲಿರುವ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ಪ್ರಜೆಗಳಾಗಬೇಕು ಎಂದರು.

ಮಾನಸ ಎಮ್ಯೂಸ್ಮೆಂಟ್ ಪಾರ್ಕ್ ಪಿಲಿಕುಳ ಇದರ ಅಧ್ಯಕ್ಷರಾಗಿರುವ ಶ್ರೀಯುತ ವಿಲ್ಫ್ರೆಡ್ ಲೋಬೊರವರು ಮಾತನಾಡಿ ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಳ್ಳುವ ಜೊತೆಗೆ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ಜನಮಾನಸದಲ್ಲಿ ಚಿರವಾಗಿ ಉಳಿಯಲು ಸಾಧ್ಯ ಎಂದರು.

ಕಾರ್ಯಕ್ರಮದ ಮತ್ತೋರ್ವ ಅತಿಥಿ ಉದಯೋನ್ಮುಖ ಕಲಾವಿದ ಶ್ರೀಯುತ ಧೀರಜ್ ನೀರು ಮಾರ್ಗ ರವರು ಸಾಂಸ್ಕೃತಿಕ ದಿನೋತ್ಸವದ ಪ್ರಯುಕ್ತ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳ ವ್ಯಕ್ತಿತ್ವದ ಸಾಂಸ್ಕೃತಿಕ ವಿಕಸನದ ದೃಷ್ಟಿಯಿಂದ ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳಿಗೆ ಸಮಾನ ಅವಕಾಶ ನೀಡಬೇಕು ಎಂದರು.

ಕಾಲೇಜಿನ ಪ್ರಾಚಾರ್ಯರು ಭಗಿನಿ ಸಾಧನ ಬಿ ಎಸ್ ರವರು ಸ್ವಾಗತಿಸಿದರು. ಉಪನ್ಯಾಸಕರಾದ ಶ್ರೀ ಅವಿಲ್ ರೆನಿಲ್ ಡಿಸಿಲ್ವ ರವರು ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಶ್ರೀಮತಿ ಭಾರತಿ ವಂದಿಸಿದರು.

Tags:

Comments powered by CComment

Copyright © 2015 - www.catholictime.com.
All rights reserved.

About Us

Disclaimer

Contact

Powered by eCreators.