CT News
Naravi, Aug 15 :Independence Day was celebrated at St Antony Educational Institutions, Naravi on August 15, 2019.
ಸಂತ ಅಂತೋನಿ ನಾರಾವಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ
Aug 15, 2019 : ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು, ನಾರಾವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಸ್ವಾಮಿ ಸೈಮನ್ ಡಿ’ಸೋಜರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿ, ರಾಷ್ಟ್ರಪತಿಯವರಿಂದ ಸೇವಾ ಪದಕ ವಿಜೇತ ಹಾಗೂ ಪ್ರಸ್ತುತ ಪಂಜಾಬ್ನಲ್ಲಿ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಯುತ ಮೈಕಲ್ ಡಿ’ಸೋಜರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ, ನಾವೆಲ್ಲರೂ ಕುಟುಂಬದಲ್ಲಿ, ಸಮಾಜದಲ್ಲಿ ಹಾಗೂ ಸೇವಾ ಕ್ಷೇತ್ರಗಳಲ್ಲಿ ನಮ್ಮ ಜವಾಬ್ದಾರಿಗಳನ್ನು ಅರಿತು ಪ್ರಾಮಾಣಿಕವಾಗಿ ನಿಭಾಯಿಸುವುದೇ ನಿಜವಾದ ಸ್ವಾತಂತ್ರ್ಯ ಎಂದು ನುಡಿದರು. ಈ ಸಂದರ್ಭದಲ್ಲಿ ಅವರನ್ನು ಶಿಕ್ಷಣ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊ, ಶ್ರೀ ಸಂತೋಷ್ ಸಲ್ಡಾನ್ಹಾ, ಸಿ. ಸುಪ್ರೀತಾ ಕ್ರಾಸ್ತಾ, ಶ್ರೀಮತಿ ಲಿಡ್ವಿನ್ ಲೋಬೊ, ಶ್ರೀಮತಿ ಸೋಫಿಯಾ ಫೆರ್ನಾಂಡಿಸ್, ಸಿ. ಗ್ರೇಸಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಕು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ಕು. ಸುಪ್ರೀತಾ ವಂದಿಸಿದರು.
Comments powered by CComment