Media Release

Naravi , Aug 27 , 2019 : St Antony College here recently organised Belthangady Taluk Level Kho Kho Tournament for P U College students.


ನಾರಾವಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ 

Aug 27 : ಸಂತ ಅಂತೋನಿ ಪದವಿ ಪೂರ್ವ ಕಾಲೇಜು, ನಾರಾವಿಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ, ಖೋ ಖೋ ಪಂದ್ಯಾಟವು ನಡೆಯಿತು. ಪಂದ್ಯಾಟವನ್ನು ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಸ್ವಾಮಿ ಸೈಮನ್ ಡಿ’ಸೋಜರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊ, ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾರಾವಿ ಪಂಚಾಯತ್ ಸದಸ್ಯರಾದ ಶ್ರೀ ಅನಿಲ್ ರೋಶನ್, ಉಪನ್ಯಾಸಕರಾದ ಶ್ರೀ ಅವಿಲ್ ಮೋರಾಸ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಪ್ರದೀಪ್ ಬಿ. ಉಪಸ್ಥಿತರಿದ್ದರು.

ಉಪನ್ಯಾಸಕಿ ಶ್ರೀಮತಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. ಬಾಲಕರ ವಿಭಾಗದಲ್ಲಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜು, ಪ್ರಥಮ, ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ದ್ವಿತೀಯ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ವೇಣೂರು ಪ್ರಥಮ ಹಾಗೂ ಸಂತ ಅಂತೋನಿ ಪದವಿ ಪೂರ್ವ ಕಾಲೇಜು, ನಾರಾವಿ ದ್ವಿತೀಯ ಸ್ಥಾನ ಗಳಿಸಿದರು.

Comments powered by CComment

Home | News | About Us | Sitemap | Contact

Copyright © 2015 - www.catholictime.com. All rights reserved.

Powered by eCreators.