Media Release

Naravi, Sep 20, 2019 : St Antony College here held Parent - Teacher Meeting recently.


ನಾರಾವಿ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಭೆ

ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ ಇತ್ತೀಚೆಗೆ ರಕ್ಷಕ-ಶಿಕ್ಷಕ ಸಭೆಯು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ವಂದನೀಯ ಸ್ವಾಮಿ ಸೈಮನ್ ಡಿ’ಸೋಜರವರು ವಹಿಸಿದ್ದರು. ಸಂಪನ್ಲೂಲ ವ್ಯಕ್ತಿಗಳಾಗಿ ಆಗಮಿಸಿದ ವೇಣೂರು ವಲಯ ಅರಣ್ಯಾಧಿಕಾರಿಗಳಾದ ಶ್ರೀ ಪ್ರಶಾಂತ್‍ಕುಮಾರ್ ಪೈ ಮಾತನಾಡಿ, ಯುವ ಪ್ರಾಯದಲ್ಲಿ ಮಕ್ಕಳನ್ನು ತಿದ್ದಿ, ಮಾರ್ಗದರ್ಶನ ನೀಡುವ ಮಹತ್ತರ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರ ಕೈಯಲ್ಲಿ ಇದೆ ಎಂದು ಮನದಟ್ಟಾಗಿ ತಿಳಿಯಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ಪ್ರಾಸ್ತಾವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಶ್ರೀಮತಿ ರೀಟಾ ಪಿಂಟೊ ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಜ್ಯೋತಿ ಹೆಗ್ಡೆ ಧನ್ಯವಾದವಿತ್ತರು. ಉಪನ್ಯಾಸಕಿ ಶ್ರೀಮತಿ ಅನಿತಾ ಡಿ’ಸೋಜ ಕಾರ್ಯಕ್ರಮ ನಿರೂಪಿಸಿದರು.

Comments powered by CComment

Home | News | About Us | Sitemap | Contact

Copyright © 2015 - www.catholictime.com. All rights reserved.

Powered by eCreators.