CT News
Mangaluru, Aug 24 : Catholic Sabha Mangalore Pradesh (R) Panir unit held "Prathibha Puraskar" and honouring programme on 21st August 2022 at Our Lady of Mercy Church hall.
ಕಥೊಲಿಕ್ ಸಭಾ ಪಾನೀರ್ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ
ಎಸ್ಸೆಸ್ಸೆಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕಥೊಲಿಕ್ ಸಭಾ ಪಾನೀರ್ ಘಟಕದ ವತಿಯಿಂದ ಪಾನೀರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಪಾನೀರ್ ಚರ್ಚ್ ಧರ್ಮಗುರು ರೆ. ಫಾ. ವಿಕ್ಟರ್ ಡಿಮೆಲ್ಲೋ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ, ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಶಿಕ್ಷಣ ನಂತರದ ಜೀವನಕ್ಕೆ ಏನೂ ಅಲ್ಲ, ಪ್ರತಿದಿನ ಪತ್ರಿಕೆ ಪುಸ್ತಕ ಓದುವ ಮೂಲಕ ಸಾಮಾನ್ಯ ಜ್ಞಾನ ಗಳಿಸುವುದು. ಇಂದಿನ ಯುವಸಮುದಾಯ ಹಾಗೂ ವಿದ್ಯಾರ್ಥಿ ಸಮುದಾಯ ಸಾಮಾನ್ಯ ಜ್ಞಾನ ಪಡೆಯುವುದನ್ನು ಮರೆತು ಜಾಲತಾಣದಲ್ಲಿ ಅನಗತ್ಯ ವಿಚಾರಗಳ ಬಗ್ಗೆ ಚರ್ಚೆಯಲ್ಲಿ ತೊಡಗಿಸಿಕೊಂಡಿದೆ. ಇದರಿಂದ ಅನಾಹುತವೇ ಹೊರತು ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದರು.
ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷೆ ಸರಿತಾ ಡಿಸೋಜ, ಕಾರ್ಯದರ್ಶಿ ಗ್ರೆಟ್ಟಾ ಡಿಕುನ್ಹಾ, ಉಳ್ಳಾಲ ವಲಯ ನಿಕಟಪೂರ್ವ ಅಧ್ಯಕ್ಷ ಆಲ್ವಿನ್ ಡಿಸೋಜ, ಪಾನೀರ್ ಘಟಕದ ನಿಕಟಪೂರ್ವ ಅಧ್ಯಕ್ಷ ಐವನ್ ಮೊಂತೆರೋ, ಚರ್ಚ್ ಪಾಲನಾ ಮಂಡಳಿ ಮಾಜಿ ಉಪಾಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹಾ, ಕಥೊಲಿಕ್ ಸಭಾ ಅಧ್ಯಕ್ಷ ಪಿಲಿಪ್ ಡಿಸೋಜ, ಕಾರ್ಯದರ್ಶಿ ಒಫಿಲಿಯಾ ಡಿಸೋಜ, ವಿನ್ನಿ ಫ್ರೆಡ್ ಫೆರ್ನಾಂಡಿಸ್ ಮೊದಲಾದವರು ಉಪಸ್ಥಿತರಿದ್ದರು.